ಯಜ್ಞದೀಕ್ಷಾನಿರ್ಣಯ 12

ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.

Leviticus 12:6 (UKJV) And when the days of her purifying are fulfilled, for a son, or for a daughter, she shall bring a lamb of the first year for a burnt offering, and a young pigeon, or a turtledove, for a sin offering, unto the door of the tabernacle of the congregation, unto the priest:

4ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.

5ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.

6ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.

7ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.

8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.

Kannada Bible (Old Version), Bible Society of India.