ಯಜ್ಞದೀಕ್ಷಾನಿರ್ಣಯ 12

ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.

Leviticus 12:7 (UKJV) Who shall offer it before the LORD, and make an atonement for her; and she shall be cleansed from the issue of her blood. This is the law for her that has born a male or a female.

5ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.

6ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.

7ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.

8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.

Kannada Bible (Old Version), Bible Society of India.