ಯಜ್ಞದೀಕ್ಷಾನಿರ್ಣಯ 12

ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.

Leviticus 12:8 (UKJV) And if she be not able to bring a lamb, then she shall bring two turtles, or two young pigeons; the one for the burnt offering, and the other for a sin offering: and the priest shall make an atonement for her, and she shall be clean.

6ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.

7ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.

8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.

Kannada Bible (Old Version), Bible Society of India.