ಯಜ್ಞದೀಕ್ಷಾನಿರ್ಣಯ 13

ತರುವಾಯ ಕರ್ತನು ಮೋಶೆ ಆರೋನರೊಡನೆ ಮಾತನಾಡಿ ಹೇಳಿದ್ದೇನಂದರೆ

Leviticus 13:1 (UKJV) And the LORD spoke unto Moses and Aaron, saying,

1ತರುವಾಯ ಕರ್ತನು ಮೋಶೆ ಆರೋನರೊಡನೆ ಮಾತನಾಡಿ ಹೇಳಿದ್ದೇನಂದರೆ

2ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.

3ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.

Kannada Bible (Old Version), Bible Society of India.