17ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ.
18ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ
19ಆ ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು.
20ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.
21ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು.