44ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.
45ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.
46ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
47ಕುಷ್ಠವ್ಯಾಧಿಯು ಅವನ ಉಡುಪಿನಲ್ಲಿದ್ದರೆ ಅದು ಉಣ್ಣೆಯ ಉಡುಪಾಗಲಿ ನಾರಿನ ಉಡುಪಾಗಲಿ
48ಉಣ್ಣೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮ ದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನ ಲ್ಲಾಗಲಿ