1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
2ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
3ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ
4ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.