19ಇದು ಮಾತ್ರವಲ್ಲದೆ ಒಬ್ಬಳು ತನ್ನ ಅಶುದ್ಧತ್ವದ ನಿಮಿತ್ತವಾಗಿ ಪ್ರತ್ಯೇಕಿಸಲ್ಪಟ್ಟಾಗ ನೀನು ಆ ಸ್ತ್ರೀಯ ಬೆತ್ತಲೆತನವನ್ನು ನೋಡುವಂತೆ ಅವಳ ಹತ್ತಿರ ಹೋಗ ಬೇಡ.
20ಇದಲ್ಲದೆ ಅವಳಿಂದ ನಿನ್ನನ್ನು ಹೊಲೆಮಾಡಿ ಕೊಳ್ಳದಂತೆ ನಿನ್ನ ನೆರೆಯವನ ಹೆಂಡತಿಯೊಂದಿಗೆ ನೀನು ಸಂಗಮಿಸಬೇಡ.
21ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
22ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು.
23ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು; ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು; ಅದು ಗಲಿಬಿಲಿಯಾದದ್ದು.