10ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
11ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
12ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು.
13ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
14ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.