9ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
10ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
11ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು.
12ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ.
13ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.