17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
19ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
20ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
21ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.