42ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
43ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
44ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
45ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.
46ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.