ಯಜ್ಞದೀಕ್ಷಾನಿರ್ಣಯ 4

ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.

Leviticus 4:34 (UKJV) And the priest shall take of the blood of the sin offering with his finger, and put it upon the horns of the altar of burnt offering, and shall pour out all the blood thereof at the bottom of the altar:

32ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;

33ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.

34ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.

35ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

Kannada Bible (Old Version), Bible Society of India.