1ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
2ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು.
3ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು.