ಯಜ್ಞದೀಕ್ಷಾನಿರ್ಣಯ 8

ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.

Leviticus 8:16 (UKJV) And he took all the fat that was upon the inwards, and the lobe above the liver, and the two kidneys, and their fat, and Moses burned it upon the altar.

14ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.

16ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.

17ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.

18ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

Kannada Bible (Old Version), Bible Society of India.