22ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
23ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.
24ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.