12ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
13ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
14ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
16ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.