22ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
23ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು.
24ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--
25ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
26ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು