48ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
49ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
50ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
51ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.