76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
77ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
78ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
79ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.
80ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.