18ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
19ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
20ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?
21ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.
22ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.