29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
30ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
31ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
32ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
33ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.