20ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
21ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
22ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
23ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.