15ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
16ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
17ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
18ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
19ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.