25ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
26ಇದನ್ನು ಕೇಳಿದವರು--ಹಾಗಾದರೆ ರಕ್ಷಣೆ ಹೊಂದುವವರು ಯಾರು? ಅಂದರು.
27ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.
28ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ
29ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು