9ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
10ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
11ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
12ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
13ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--