ಲೂಕ 2

ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.

Luke 2:50 (UKJV) And they understood not the saying which he spoke unto them.

48ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.

49ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.

50ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.

51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.

52ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.

Kannada Bible (Old Version), Bible Society of India.