ಲೂಕ 20

ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.

Luke 20:18 (UKJV) Whosoever shall fall upon that stone shall be broken; but on whomsoever it shall fall, it will grind him to powder.

16ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.

17ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?

18ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.

19ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.

20ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.

Kannada Bible (Old Version), Bible Society of India.