36ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
37ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
38ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು.
39ಆಗ ಶಾಸ್ತ್ರಿಗಳಲ್ಲಿ ಕೆಲವರು ಪ್ರತ್ಯುತ್ತರ ವಾಗಿ--ಬೋಧಕನೇ, ನೀನು ಸರಿಯಾಗಿ ಹೇಳಿದ್ದೀ ಅಂದರು.
40ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ.