11ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
12ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
13ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು.
14ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.