ಲೂಕ 23

​ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.

Luke 23:1 (UKJV) And the whole multitude of them arose, and led him unto Pilate.

1​ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.

2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.

3ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.

Kannada Bible (Old Version), Bible Society of India.