51ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)
52ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
53ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
54ಸಬ್ಬತ್ತಿಗೆ ಸವಿಾಪವಾಗಿದ್ದ ಆ ದಿನವು ಸಿದ್ಧತೆಯ ದಿನವಾಗಿತ್ತು.
55ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.