21ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
22ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
23ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
24ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು;
25ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು;