ಲೂಕ 5

ಇದಾದ ಮೇಲೆ ಆತನು ಗೆನೇಜರೆತ್‌ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.

Luke 5:1 (UKJV) And it came to pass, that, as the people pressed upon him to hear the word of God, he stood by the lake of Gennesaret,

1ಇದಾದ ಮೇಲೆ ಆತನು ಗೆನೇಜರೆತ್‌ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.

2ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.

3ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.

Kannada Bible (Old Version), Bible Society of India.