26ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
27ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
29ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
30ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.