ಲೂಕ 7

ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--

Luke 7:40 (UKJV) And Jesus answering said unto him, Simon, I have somewhat to say unto you. And he says, Master, say on.

38ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.

39ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.

40ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--

41ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.

42ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.

Kannada Bible (Old Version), Bible Society of India.