1ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
2ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
3ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.