ಲೂಕ 9

ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.

Luke 9:60 (UKJV) Jesus said unto him, Let the dead bury their dead: but go you and preach the kingdom of God.

58ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.

59ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.

60ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.

61ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.

62ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.

Kannada Bible (Old Version), Bible Society of India.