16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
17ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.
18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.