1ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--
2ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ.
3ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.