23ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.
24ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
25ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
26ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
27ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.