27ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
28ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
29ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ.
30ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
31ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.