9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
10ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.
11ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.
12ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
13ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.