13ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
17ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;