ಮಾರ್ಕ್ 2

ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು.

Mark 2:3 (UKJV) And they come unto him, bringing one sick of the palsy, which was borne of four.

11 ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು.

2ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು;

3ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು.

4ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.

5ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.

Kannada Bible (Old Version), Bible Society of India.