28ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;
29ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.
30ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
31ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
32ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.