13ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
14ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
15ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
16ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
17ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.