15ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
16ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
17ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
18ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ
19ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.