ಮಾರ್ಕ್ 5

ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.

Mark 5:39 (UKJV) And when he was come in, he says unto them, Why make all of you this disturbance, and weep? the damsel is not dead, but sleeps.

37ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.

38ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.

39ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.

40ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.

41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್‌ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.

Kannada Bible (Old Version), Bible Society of India.