38ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
39ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
40ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
42ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.